ಢಾಕಾ: ಬಾಂಗ್ಲಾದೇಶದ (Bangladesh Clash) ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಅವಾಮಿ ಲೀಗ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತೊಮ್ಮೆ ಸಂಘರ್ಷದ ಹಾದಿ ಹಿಡಿದಿದೆ. ಪರಿಣಾಮ 72 ಜನ ಸಾವನ್ನಪ್ಪಿದ್ದಾರೆ.
ಬಾಂಗ್ಲಾ ಸಂಘರ್ಷದಿಂದಾಗಿ ದೇಶದಲ್ಲಿರುವ ಭಾರತೀಯರು ಆತಂಕಗೊಂಡಿದ್ದಾರೆ. ಬಾಂಗ್ಲಾದಲ್ಲಿನ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ ಕಚೇರಿ ಸೂಚನೆ ರವಾನಿಸಿದೆ. ಭಾರತದ ಸಹಾಯಕ ಹೈ ಕಮಿಷನ್, ಸಿಲ್ಹೆಟ್ ನ ಅಧಿಕಾರ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ವಿನಂತಿಸಲಾಗಿದೆ.ರ್ಕಾರಿ ಉದ್ಯೋಗ ಕೋಟಾ ಕುರಿತಾದ ಪ್ರತಿಭಟನೆಗಳು ಮತ್ತೆ ಬಾಂಗ್ಲಾದಲ್ಲಿ ಜೀವ ಪಡೆದುಕೊಂಡಿವೆ. ಸಾವನ್ನಪ್ಪಿದವರಲ್ಲಿ 14 ಜನರು ಪೊಲೀಸರು ಸೇರಿದ್ದಾರೆ.
ಇತ್ತೀಚೆಗಷ್ಟೇ 1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಿಡುವ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಅವಾಮಿ ಲೀಗ್, ಛತ್ರ ಲೀಗ್, ಜುಬೋ ಲೀಗ್ ಕಾರ್ಯಕರ್ತರ ನಡುವೆ ಮತ್ತೆ ಘರ್ಷಣೆಯಾಗಿದೆ.