ನವದೆಹಲಿ: ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ನೆಲಕಚ್ಚಿರುವ ದೇಶದ ಅರ್ಥವ್ಯವಸ್ಥೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಹರಸಾಹಸ ನಡೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿರುವ ಕೇಂದ್ರ ಬಜೆಟ್‍ಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಮೊದಿ ಸರ್ಕಾರಕ್ಕೆ ಗುಡ್ ನ್ಯೂಸ್ ಸಿಕ್ಕಿದೆ.
ದೇಶಾದ್ಯಂತ ಲಾಕ್‍ಡೌನ್ ಹಾಗೂ ನಿರ್ಬಂಧಗಳನ್ನು ಹಂತ ಹಂತವಾಗಿ ವಾಪಸ್ ಪಡೆದ ಬಳಿಕ ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಚುರುಕು ಪಡೆದಿದೆ. ಜನವರಿ ತಿಂಗಳಲ್ಲಿ ಜಿಎಸ್‍ಟಿ ಸಂಗ್ರಹವು ಸಾರ್ವಕಾಲಿಕ ಗರಿಷ್ಠ 1.20 ಲಕ್ಷ ಕೋಟಿಗೆ ಏರಿಕೆಯಾಗಿದೆ.

ದಿನ ಬಳಕೆಯ ವಸ್ತುಗಳ ಮಾರಾಟ ಅಥವಾ ಟ್ರಾವೆಲ್ ಬುಕ್ಕಿಂಗ್‍ನಂತಹ ಸೇವೆಗಳಿಂದ ಜನವರಿಯಲ್ಲಿ ಶೇ. 8ರಷ್ಟು ಸರಕು ಮತ್ತು ಸೇವಾ ತೆರಿಗೆ ಹೆಚ್ಚಾಗಿದೆ. ಜನವರಿ ತಿಂಗಳಲ್ಲಿ ಸಂಗ್ರಹವಾದ ತೆರಿಗೆಯ ಪ್ರಮಾಣವು ಜುಲೈ 2017 ರಲ್ಲಿ ರಾಷ್ಟ್ರವ್ಯಾಪಿ ಜಿಎಸ್‍ಟಿ ತೆರಿಗೆ ಜಾರಿಗೆ ಬಂದ ಬಳಿಕ ಸಂಗ್ರಹವಾದ ಅತ್ಯಂತ ಗರಿಷ್ಠ ತೆರಿಗೆಯಾಗಿದೆ ಎಂದು ಹಣಕಾಸು ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ಡಿಸೆಂಬರ್ 2020ರಲ್ಲಿ 1,15,174 ಕೋಟಿ ಜಿಎಸ್‍ಟಿ ಸಂಗ್ರಹವಾಗಿತ್ತು. ಸತತ 4ನೇ ತಿಂಗಳಲ್ಲಿ 1 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದ್ದು, ಇದು ಆರ್ಥಿಕತೆಯ ಬಲವಾದ ಚೇತರಿಕೆಯ ಸಂಕೇತವಾಗಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ನಕಲಿ-ಬಿಲ್ಲಿಂಗ್ ವಿರುದ್ಧ ನಿಕಟ ಮೇಲ್ವಿಚಾರಣೆ, ಜಿಎಎಸ್‍ಟಿ, ಆದಾಯ ತೆರಿಗೆ ಮತ್ತು ಕಸ್ಟಮ್ಸ್ ಐಟಿ ವ್ಯವಸ್ಥೆಗಳಲ್ಲಿ ಪರಿಣಾಮಕಾರಿ ತೆರಿಗೆ ಆಡಳಿತವು ಈ ಗರಿಷ್ಠ ತೆರಿಗೆ ಸಂಗ್ರಹಕ್ಕೆ ಕಾರಣವಾಗಿದೆ. ಹಣಕಾಸಿನ ವರ್ಷದ ಮೊದಲಾರ್ಧದಲ್ಲಿ ಏಪ್ರಿಲ್-ಸೆಪ್ಟೆಂಬರ್ ಕ್ಕೆ ಹೋಲಿಸಿದರೆ ಅಕ್ಟೋಬರ್-ಜನವರಿ ಅವಧಿಯಲ್ಲಿ ಜಿಎಎಸ್‍ಟಿ ಆದಾಯವು ಸರಾಸರಿ ಶೇ. 8 ರಷ್ಟು ಹೆಚ್ಚಾಗಿದೆ.
ಹೀಗಾಗಿ ಇಂದಿನ ನಿರ್ಮಲಾ ಸೀತಾರಾಮನ್ ಅವರ ಹಣಕಾಸು ಬಜೆಟ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








