ಕೊಡಗು: ನಿವೃತ್ತ ಯೋಧರೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಡೆತ್ ನೋಟ್ ನಲ್ಲಿ ನಿವೃತ್ತ ಯೋಧರು ಮಹಿಳೆಯೊಬ್ಬರು ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾಗಿರುವ ನಿವೃತ್ತಿ ಹೊಂದಿದ ಯೋಧ ಎನ್ನಲಾಗಿದೆ. ಅವರು ಜೀವಿತಾ ಎಂಬ ಮಹಿಳೆಯ ವಿರುದ್ಧ ಆರೋಪ ಮಾಡಿದ್ದಾರೆ. ಅಲ್ಲದೇ, ಸತೀಶ್ ಎಂಬ ಪೊಲೀಸ್ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾಪತ್ತೆಯಾದ ನಂತರ ಪಂಪಿನ ಕೆರೆ ಬಳಿ ಸಂದೇಶ್ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.








