ಮೂವರು ಉಗ್ರರನ್ನು ಹೊಡೆದುರುಳಿದ ಯೋಧರು
ಜಮ್ಮು- ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು&ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಯ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಎಲ್‌ಇಟಿ ಸಂಘಟನೆಯ ಮೂವರು ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆಗೆ ಮುಂದಾದ ಭದ್ರತಾ ಸಿಬ್ಬಂದಿಯನ್ನು ಕಂಡು ಉಗ್ರರು ಗುಂಡು ಹಾರಿಸಲು ಶುರು ಮಾಡಿದ್ದಾರೆ.
ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಉಗ್ರರು ಹತರಾದರು. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಅಡಗಿಕೊಂಡ ಉಗ್ರರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.