ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ತೆಗೆದಿಡಲು ಪ್ರತ್ಯೇಕ ಸ್ಥಳ ಅವಕಾಶ – Saaksha Tv
ಬೆಂಗಳೂರು: ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಆವೃತ್ತ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ.









