ರಾಮನಗರ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆಗಳು (Wild Elephant) ಪ್ರತ್ಯಕ್ಷವಾಗಿದ್ದು, ಜನ ಭಯಭೀತರಾಗಿದ್ದಾರೆ.
ರಾಮನಗರ ನಗರ (Ramanagara Town) ವ್ಯಾಪ್ತಿಯಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಹೆಚ್ಚಿಸಿವೆ. ರಂಗರಾಯರ ಕೆರೆ ಹತ್ತಿರ ಕಾಡಾನೆ ಕಂಡು ಪಕ್ಕದ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಜನ ಓಡಿ ಹೋಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಸಿಬ್ಬಂದಿ ಕಾಡಾನೆಗಳನ್ನು ವಾಪಸ್ ಕಾಡಿಗಟ್ಟುವ ಕೆಲಸ ಮಾಡುತ್ತಿದ್ದಾರೆ.
ಪಕ್ಕದ ದೊಡ್ಡಮಣ್ಣುಗುಡ್ಡೆ ಅರಣ್ಯ ವ್ಯಾಪ್ತಿಯಿಂದ ನಗರ ಪ್ರದೇಶಕ್ಕೆ ಬಂದಿರುವ ಕಾಡಾನೆಗಳು ರಂಗರಾಯರದೊಡ್ಡಿ ಲೇಔಟ್‌ನಲ್ಲಿ ಓಡಾಡಿ ಬಳಿಕ ಪಕ್ಕದ ಬೆಟ್ಟವನ್ನೇರಿವೆ. ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಜನರು ಮನವಿ ಮಾಡುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್
ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...








