ಮನೆಯಲ್ಲಿ ಮಗುವನ್ನು ಎಳೆದೊಯ್ದು ದುಷ್ಕರ್ಮಿಗಳು ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ. ರಾತ್ರಿ ವೇಳೆ 9 ವರ್ಷದ ಬಾಲಕಿ ರಾತ್ರಿ ವೇಳೆ ಮಲಗಿದೆ. ಈ ವೇಳೆ ರಘುವೀರ್ ಜಾಟ್ ಎಂಬಾತ ಮನೆಗೆ ಬಂದಿದ್ದಾನೆ. ಆಗ ಬಾಲಕಿಯನ್ನು ಎತ್ತಿಕೊಂಡು ಹೊಲಕ್ಕೆ ಹೋಗಿ ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಕಾಣೆಯಾಗಿದ್ದನ್ನು ಕಂಡು ಮನೆಯವರು ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಕುಟುಂಬಸ್ಥರು ಹೊಲದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.