ದಾವಣಗೆರೆ : ಕರ್ತವ್ಯ ನಿರತ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಹದಡಿ ಗ್ರಾಮದ ನಾಗರಾಜ್(32) ಆತ್ಮಹತ್ಯೆಗೆ ಶರಣಾದ ಯೋಧ. ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ನಿನ್ನೆ ಬೆಳಿಗ್ಗೆ 4ಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಪಂಜಾಬ್, ಹರಿಯಾಣ ಸೆಕ್ರೆಟರಿಯೇಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 6 ವರ್ಷಗಳಿಂದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯಾಗಿದ್ದರು. ದಾವಣಗೆರೆ ಮೂಲದ ಶಿಲ್ಪಾ ಎಂಬುವರನ್ನ ಮದುವೆ ಆಗಿದ್ದು, ಇಬ್ಬರು ಪುತ್ರಿಯರಿದ್ದಾರೆ. ನಾಗರಾಜ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಸ್ವಗ್ರಾಮ ಹದಡಿಗೆ ತರಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ ರಿಷ್ಯಂತ ತಿಳಿಸಿದ್ದಾರೆ.








