ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯೋಧ Saaksha Tv
ಗುಜರಾತ: ಪಂಜಾಬ್ನ ಸೈನಿಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶಾಹಿಬಾಗ್ ಸೇನಾ ಕಂಟೋನ್ಮೆಂಟ್ನಲ್ಲಿ ನಡೆದಿದೆ.
ಅಹಮದಾಬಾದ್ನ ಶಾಹಿಬಾಗ್ನಲ್ಲಿರುವ ಸೇನಾ ಕಂಟೋನ್ಮೆಂಟ್ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಗುರ್ಜಯ್ಪಾಲ್ ಸಿಂಗ್. ಇವರು ರೈಫಲ್ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸೈನಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಗುರ್ಜಯ್ ಪಾಲ್ ಸಿಂಗ್, ಶಾಹಿಬಾಗ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಕಂಟೋನ್ಮೆಂಟ್ಗೆ ವಾಪಸ್ ಆಗಿದ್ದರು. ಈ ವೇಳೆ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತನ ಆತ್ಮಹತ್ಯೆಗೆ ಏನು ಕಾರಣ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭ ಮಾಡಿದ್ದಾರೆ.