ಚಿಕ್ಕೋಡಿ: ಯೋಧನ ಪತ್ನಿಯೊಬ್ಬರು ಅತ್ತೆಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಬೆಳಗಾವಿ ((Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಎಂಬಲ್ಲಿ ಈ ಘಟನೆ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೆ ಶರಣಾಗಿರುವ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮನೆಯಲ್ಲಿ ಅತ್ತೆ ಸೇವಂತಾ ಹಾಗೂ ರೂಪಾಬಾಯಿ ಮಧ್ಯೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗುತ್ತಿದೆ. ಅತ್ತೆಯು ಸೊಸೆಗೆ ಪ್ರತಿ ದಿನ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ರೂಪಾಬಾಯಿ ಪತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.