ತಿರುವನಂತಪುರಂ: ಕೊಚ್ಚಿನ್ ವಿಶ್ವವಿದ್ಯಾನಿಲಯದ (Cochin University) ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿ, 55 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ಕಾರ್ಯಕ್ರಮ ನಡೆಯುತ್ತಿತ್ತು. ಗಾಯಕಿ ನಿಖಿತಾ ಗಾಂಧಿ ಕ್ಯಾಂಪಸ್‍ನಲ್ಲಿರುವ ಓಪನ್ ಏರ್ ಆಡಿಟೋರಿಯಂನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಪಾಸ್ ಇಲ್ಲದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಹೀಗಾಗಿ ವಿದ್ಯಾರ್ಥಿಗಳು ಹೊರಗಡೆ ನಿಂತು ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಆಗ ಜೋರಾಗಿ ಮಳೆಯಾಗಿದೆ. ಈ ವೇಳೆ ಓಡಿ ಆಡಿಟೋರಿಯಂಗೆ ನುಗ್ಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿ, 55ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.