ಬೆಂಗಳೂರು: ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು ಇಲ್ಲಿಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ.
ಆವಲಹಳ್ಳಿ, ಬಿಡಿಎ ಲೇಔಟ್ ನಲ್ಲಿ ವಾಸಿಸುತ್ತಿದ್ದ 44 ವರ್ಷದ ಮಹಿಳೆಯೊಬ್ಬರು ಈ ಕುರಿತು ದೂರು ದಾಖಲಿಸಿದ್ದಾರೆ. ಮಹಿಳೆಯ ಮನೆ ಬಾಗಿಲಿಗೆ ಪಕ್ಕದ ಮನೆಯ ಬೆಡ್ ರೂಮ್ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುತ್ತಾರೆ. ಇದು ವಿಕೃತ ಹಾಗೂ ಅಸಹ್ಯ ಹುಟ್ಟಿಸುತ್ತಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಕ್ಕೆ ಮುಜುಗರಕ್ಕೆ ಒಳಗಾದ ಮಹಿಳೆ ಕಿಟಕಿ ಹಾಕಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಇದಕ್ಕೆ ಪಕ್ಕದ ಮನೆಯವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ, ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೆಲವು ಯುವಕರನ್ನು ಕರೆಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.