ಕೋಲಾರ : ಮೆಡಿಕಲ್ ವಿದ್ಯಾರ್ಥಿನಿ(Medical Student) ಕಲ್ಲು ಕ್ವಾರಿಯ ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ (Kolar) ತಾಲೂಕಿನ ಕೆಂದಟ್ಟಿ ಗ್ರಾಮದ ಹತ್ತಿರ ನಡೆದಿದೆ.
ಕ್ವಾರಿಯಲ್ಲಿ ಬಿದ್ದು ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ (Suicide) ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ನೇಹಿತರು ತಿಳಿಸಿದ್ದಾರೆ.
ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು. ಸದ್ಯ ವಿಧ್ಯಾರ್ಥಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








