ಕೋಲಾರ: ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಖಾಸಗಿ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ (Student) ವಸತಿ ನಿಲಯದಲ್ಲಿ (Hostel) ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದುಶ್ರೀ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ವಿದ್ಯಾರ್ಥಿನಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದವಳು ಎನ್ನಲಾಗಿದೆ. ಸ್ಥಳಕ್ಕೆ ಪೋಷಕರು ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.