ಹಿಜಾಬ್ ಗಾಗಿ ಪರೀಕ್ಷೆಯನ್ನೇ ನಿರಾಕರಿಸಿದ ವಿದ್ಯಾರ್ಥಿನಿ
ಬಾಗಲಕೋಟೆ: ಸೋಮವಾರ ರಾಜ್ಯಾಂದ್ಯಂತ SSLC ಪರೀಕ್ಷೆ ಪ್ರಾರಂಭವಾಗಿದ್ದು, ವಿದ್ಯಾರ್ಥನಿಯು ಹಿಜಾಬ್ ತೆಗೆಯಲು ಒಪ್ಪದೇ ಪರೀಕ್ಷೆಯನ್ನು ನಿರಾಕರಿಸಿ ಮನೆಗೆ ತೆರಳಿರುವ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಲ್ಲಿ ನಡೆದಿದೆ.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಹಿಜಾಬ್ ಹಾಕಿಕೊಂಡು SSLC ಪರೀಕ್ಷೆ ಬರೆಯಲು ಬಂದಿದ್ದಳು. ಇವಳಂತೆ ಇರತ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಪರೀಕ್ಷೆ ಬರೆಯಲು ಬಂದಿದ್ದರು. ಈ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾದರು.
ಆದರೆ ಒಬ್ಬ ವಿದ್ಯಾರ್ಥನಿ ಮಾತ್ರ ಹಿಜಾಬ್ ತೆಗೆಯದೆ ಪರೀಕ್ಷೆ ಬರೆಯಲು ಮುಂದಾಗಿದ್ದಾಳೆ. ಈ ವೇಳೆ ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯುವಂತೆ ಶಿಕ್ಷಕರು ಪರೀಕ್ಷಾ ಸಿಬ್ಬಂದಿ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥನಿ ಪರೀಕ್ಷೆ ಬರೆಯದೆ, ಪೋಷಕರೊಂದಿಗೆ ಮನೆಗೆ ಮರಳಿದ್ದಾಳೆ.
SSLC ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ಎಲ್ಲ ಶಾಲೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿದೆ. ಅಲ್ಲದೇ ಶಾಲೆಯ ಸುತ್ತಮುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಗೊಳಿಸಲಾಗಿದೆ