ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿಯೇ ಈ ಕುರಿತು ಪ್ರಕರಣ ದಾಖಲಾಗಿತ್ತು. ಶಿಕ್ಷಕ ವಿರಾಜ್ ಜೈನ್ ಎಂಬಾತನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ಓದುತ್ತಿದ್ದಳು. ಆದರೆ, ಇತ್ತೀಚೆಗೆ ಶಾಲೆಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿನಿ ಪೋಷಕರ ಮುಂದೆ ಅಳಲು ತೋಡಿಕೊಂಡಿದ್ದಾಳೆ. ಆಗ ಪಾಲಕರು ಪ್ರಶ್ನಿಸಿದಾಗ ವಿದ್ಯಾರ್ಥಿ ಬಾಯಿ ಬಿಟ್ಟಿದ್ದಾಳೆ.
ಶಿಕ್ಷಕ ವಿರಾಜ್ ಜೈನ್ ಕಳೆದ ವರ್ಷ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.