ಚಿಕ್ಕಬಳ್ಳಾಪುರ: ವಿದ್ಯಾರ್ಥಿಯೊಬ್ಬಾತ ಉಪನ್ಯಾಸಕನ ವಿರುದ್ಧ ವಿಡಿಯೋ ಮಾಡಿ, ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ ಪುತ್ರ ಗಜೇಂದ್ರ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಈ ವಿದ್ಯಾರ್ಥಿ ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಉಪನ್ಯಾಸಕ ಮುಂಜುನಾಥ್ ವಿರುದ್ಧ ಕಿರುಕುಳದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಗಜೇಂದ್ರನಿಗೆ ಉಪನ್ಯಾಸಕ ಮಂಜುನಾಥ್ ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ಕಿರುಕುಳ ಕೊಡುತ್ತಿದ್ದ. ಪದೇ ಪದೇ ಹಲ್ಲೆ ಮಾಡುವುದು, ಅಸೈನ್ ಮೆಂಟ್ ಬುಕ್ ಹರಿದು ಹಾಕಿ ಉಳಿದ ವಿದ್ಯಾರ್ಥಿಗಳ ಎದುರು ಅವಮಾನ ಮಾಡುವುದು ಮಾಡುತ್ತಿದ್ದರು ಎಂದು ವಿಡಿಯೋದಲ್ಲಿ ಆರೋಪಿಸಿದ್ದಾನೆ. ಸಾವಿಗೆ ಮಂಜುನಾಥ್ ಕಾರಣ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ಗಜೇಂದ್ರ ಹೇಳಿದ್ದಾನೆ. ಹೀಗಾಗಿ ಪೊಷಕರು ಹಾಗೂ ಸಂಬಂಧಿಕರು ಪಾಲಿಟೆಕ್ನಿಕ್ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.