ಚಿಕ್ಕಬಳ್ಳಾಪುರ : ಅಪ್ರಾಪ್ತ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಬಾಗೇಪಲ್ಲಿ (Bagepally)ಯ ಕೊಂಡವಾರಪಲ್ಲಿಯಲ್ಲಿ ನಡೆದಿದೆ. ಈರೇನಹಳ್ಳಿ ಗ್ರಾಮದ ನಯನ (15) ಮೃತ ಎಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಗೆ ಹೋಗುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ಶಾಲೆಗೂ ಹೋಗಿರಲಿಲ್ಲ. ಬಸ್ ಮೂಲಕ ಬಾಗೇಪಲ್ಲಿಗೆ ತೆರಳಿ ಅಲ್ಲಿಂದ ಬಾಗೇಪಲ್ಲಿ ಪಟ್ಟಣ ಹೊರವಲಯದ ಕೊಂಡ್ರವಾರಪಲ್ಲಿ ಕೆರೆ ಬಳಿ ಹೋಗಿದ್ದಾಳೆ ಎನ್ನಲಾಗಿದೆ.
ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಶೂ, ಬ್ಯಾಗ್ ಪತ್ತೆಯಾಗಿದ್ದು, ಕೆರೆಯಲ್ಲಿ ಶವ ತೇಲಿ ಬಂದಿದೆ. ಇದನ್ನು ಗಮನಿಸಿದ ಕುರಿಗಾಹಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬ್ಯಾಗ್ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿಯ ವಿಳಾಸ ಪತ್ತೆಯಾಗಿದ್ದು, ಪೋಷಕರು ಹಾಗೂ ಶಾಲೆಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುವುದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.