ನವದೆಹಲಿ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು, ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.
ಈ ಕುರಿತು ಗುಪ್ತಚರ ಇಲಾಖೆ ಎಚ್ಚರಿಸಿದೆ. ಸಣ್ಣ- ಸಣ್ಣ ಗುಂಪುಗಳಲ್ಲಿ ದೆಹಲಿಗೆ ಆಗಮಿಸುತ್ತಿರುವ ರೈತರು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ ಗುಪ್ತಚರ ಇಲಾಖೆ ಎಚ್ಚರಿಸಿದೆ.
ಈ ಕುರಿತು ಗುಪ್ತಚರ ಇಲಾಖೆ ವರದಿ (Intelligence Report) ಬಿಡುಗಡೆ ಮಾಡಿದೆ. ವರದಿ ಪ್ರಕಾರ ಪಂಜಾಬ್ ಒಂದರಿಂದಲೇ 1500 ಟ್ರ್ಯಾಕ್ಟರ್, 509 ವಿವಿಧ ವಾಹನಗಳ ಮೂಲಕ ರೈತರು ಬರುತ್ತಿದ್ದಾರೆ. ಹರಿಯಾಣದಿಂದ ರೈತರ ಸಂಖ್ಯೆ ಹೆಚ್ಚಾಗಿದೆ. ರೈತರು ಸುಮಾರು 6 ತಿಂಗಳಿಗೆ ಬೇಕಾಗುವ ಆಹಾರ ಧಾನ್ಯಗಳನ್ನು ಸಂಗ್ರಹಿಸಿ ಬರುತ್ತಿದ್ದಾರೆ ಎನ್ನಲಾಗುತ್ತಿದೆ.
ರೈತರು ಸಣ್ಣ ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರಗಳು, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡಿದ್ದು, ಕ್ಷಿಪ್ರ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.