ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲೇ ಶಿಕ್ಷಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಗಜಾನನ ಹಿರೇಮಠ್ (46) ಸಾವನ್ನಪ್ಪಿರುವ ಶಿಕ್ಷಕ. ಕುಸಿದು ಬಿದ್ದು ಸಾವನ್ನಪ್ಪಿರುವ ಶಿಕ್ಷಕ, ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಆದರೆ, ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಶಿಕ್ಷಕ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಾಗರ (Sagara) ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದೆ. ಆದರೆ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.