ಕಳೆದ ವಾರ ಕರೂರ್‌ನಲ್ಲಿ 17 ವರ್ಷದ ಬಾಲಕಿಯೊಬ್ಬಳು ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳು ಕೊಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಗಣಿತ ಶಿಕ್ಷಕರೊಬ್ಬರು ನಾನು ಅಪರಾಧಿಯಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
ಶರವಣ ಎಂಬ ಹೆಸರಿನ ಶಿಕ್ಷಕರು ವಿದ್ಯಾರ್ಥಿನಿ ಓದುತ್ತಿದ್ದ ಕರೂರಿನ ಖಾಸಗಿ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು “ ನಾನು ನಿರಫರಾಧಿ ಆದರೆ ಗ ಬಂದಿರುವ ಆರೋಪದಿಂದ ನಾನು ವಿದ್ಯಾರ್ಥಿಗಳನ್ನ ಎದುರಿಸಲು ನಾಚಿಕೆಯಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಸುಸೈಡ್ ಮಾಡಿಕೊಂಡಿದ್ದಾರೆ.
ಕಳೆದ ವಾರ, ಕರೂರಿನಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಅವಳು ಲೈಂಗಿಕ ಕಿರುಕುಳದ ಬಗ್ಗೆ ಸೂಸೈಡ್ ನೋಟ್ ಅನ್ನು ಬರೆದಿಟ್ಟು ಹೋಗಿದ್ದಳು ಆದರೆ ಯಾವುದೇ ಹೆಸರನ್ನ ಉಲ್ಲೇಖಿಸಿರಲಿಲ್ಲ. ಆದರೆ ಪೊಷಕರು ಮತ್ತು ವಿದ್ಯಾರ್ಥಿಗಳು ಈ ಶಿಕ್ಷಕರ ಮೇಲೆ ಆರೋಪ ಮಾಡಿದ್ದರು.
ಶರವಣನ್ ಪತ್ನಿ ನೀಡಿದ ದೂರಿನ ಮೇರೆಗೆ ತುರೈಯೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕರೂರ್ ಪೊಲೀಸರು, ವಿಶೇಷ ತಂಡಗಳು ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ವಿಶೇಷ ತಂಡಗಳು ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಿವೆ.








