ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿಕೊಂಡ ಬಾಲಕ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ…
ಶಾಲಾ ಸಮವಸ್ತ್ರದಲ್ಲಿ ಬಾಲಕನೊಬ್ಬ ಮಲ ವಿಸರ್ಜನೆ ಮಾಡಿಕೊಂಡಿದ್ದಕ್ಕೆ ಸಿಟ್ಟಾದ ಶಿಕ್ಷರೊಬ್ಬರು 8 ವರ್ಷದ ಬಾಲಕನ ಮೇಲೆ ಬಿಸಿ ನೀರು ಸುರಿದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಎರಡನೇ ತರಗತಿ ವಿದ್ಯಾರ್ಥಿಯಾಗಿರುವ 8 ವರ್ಷದ ಅಖಿತ್ ಗೆ ಗಂಭೀರ ಗಾಯಗಳಾಗಿದ್ದು, ಮಗುವನ್ನ ಲಿಂಗಸೂರು ಆಸ್ಪತ್ರಗೆ ಸೇರಿಸಲಾಗಿದೆ. ಬಿಸಿ ನೀರು ಎರಚಿ ವಿಕೃತಿ ಮೆರೆದ ಶಿಕ್ಷನ ವಿರುದ್ದ ಕಠಿಣ ಕ್ರಮಕ್ಕೆ ಸ್ಥಳಿಯರು ಆಗ್ರಹಿಸಿದ್ದಾರೆ.
ಮಿಟ್ಟಿಕೆಲ್ಲೂರು ಮೂಲದ ಗ್ರಾಮದ ವಿದ್ಯಾರ್ಥಿ ಶಾಲೆಗೆ ಹೋದಾಗ ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿ ಮಲ ವಿಸರ್ಜನೆ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರಚಿದ್ದು, ಮಗುವಿನ ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿವೆ.
ಕಳೆದ ಸೆಪ್ಟಂಬರ್ 2ರಂದು ಘಟನೆ ನಡೆದಿದೆ. ಘಟನೆ ನಡೆದು ಒಂದು ತಿಂಗಳಾದರೂ ದೂರು ದಾಖಲಿಸಿಕೊಳ್ಳಲು ಮಸ್ಕಿ ಪೊಲೀಸರು (Police) ಹಿಂದೇಟು ಹಾಕಿದ್ದಾರೆ.. ಕೂಡಲೇ ಶಿಕ್ಷಕನ ವಿರುದ್ದ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸದ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.