ಮಂಡ್ಯ: ಯುವನಕೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ಕುರುಬರದೊಡ್ಡಿ (Kurubaradoddi) ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕ ಎಂಜಿನಿಯರ್ (Engineer) ಕೆಲಸ ಮಾಡುತ್ತಿದ್ದ. ಆದರೆ, ನೀರಿನ ಟ್ಯಾಂಕ್ ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಜ್ಞಾನೇಶ್ (30) ಸಾವನ್ನಪ್ಪಿರುವ ವ್ಯಕ್ತಿ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತ್ತಿ ಗ್ರಾಮದ ನಿವಾಸಿಯಾದ ಈತ ಕಳೆದ ಹಲವು ವರ್ಷಗಳಿಂದ ಕೆಸ್ತೂರು ಗ್ರಾಮದಲ್ಲಿ ವಾಸವಾಗಿದ್ದ. ಸಾವನ್ನಪ್ಪಿರುವ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ʼWork Pressureʼ ಎಂದು ಹಾಕಿಕೊಂಡಿದ್ದ. ಕೆಲಸದ ಒತ್ತಡದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








