ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 12 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದ್ದು, ಮಿನಿ ಬಸ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 23 ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಬಸ್ ನಲ್ಲಿ 35 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಕಂಟೇನರ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.6 ಜನ ಮಹಿಳೆಯರು, ಓರ್ವ ಬಾಲಕ ಸೇರಿದಂತೆ 12 ಜನ ಸಾವನ್ನಪ್ಪಿದ್ದಾರೆ.