ಲಕ್ನೋ: ಭೀಕರ ಅಪಘಾತಕ್ಕೆ 18 ಜನ ಬಲಿಯಾಗಿರುವ ಘಟನೆ ನಡೆದಿದೆ.
ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ (Double Decker Bus0 ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 18 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ (Lucknow Agra Expressway) ನಲ್ಲಿ ಈ ಘಟನೆ ನಡೆದಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು (UP Police) ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ಪ್ರಾಥಮಿಕ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಉನ್ನಾವೋ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ, ಬುಧವಾರ (ಇಂದು) ಬೆಳಿಗ್ಗೆ 5:15ರ ಸುಮಾರಿಗೆ ಬಿಹಾರದ ಮೋತಿಹಾರಿಯಿಂದ ಬರುತ್ತಿದ್ದ ಡಬಲ್ ಡೆಕ್ಕರ್ ಖಾಸಗಿ ಬಸ್, ಹಾಲಿನ ಟ್ಯಾಂಕರ್‌ಗೆ (Milk Tanker) ಡಿಕ್ಕಿ ಹೊಡೆದಿದೆ. ಪರಿಣಾಮ 18 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 20ಕ್ಕೂ ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಸ್‌ನ ಅತಿವೇಗದ ಚಾಲನೆಯೇ ಕಾರಣವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎದು ಹೇಳಿದ್ದಾರೆ.








