ಭೀಕರ ಅಪಘಾತಕ್ಕೆ 6 ಜನ ಬಲಿಯಾಗಿರುವ ಘಟನೆಯೊಂದು ನಡೆದಿದೆ.
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಪಿಕ್ ಅಪ್ ಟ್ರಕ್ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಹತ್ತಿರ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೀಪ್ ನಲ್ಲಿದ್ದವರು ಕಾರ್ಯಕ್ರಮವೊಂದಕ್ಕೆ ಹೋಗಿ ಮರಳಿ ಬರುತ್ತಿದ್ದರು ಎನ್ನಲಾಗಿದೆ.