ನವದೆಹಲಿ: ರಾಂಗ್ ರೂಟ್ ನಲ್ಲಿ ಬಂದ ಕಾರಿನಿಂದಾಗಿ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ವೇನಲ್ಲಿ (Mumbai Nagpur Expressway) ಈ ಘಟನೆ ನಡೆದಿದೆ. ರಾಂಗ್ ರೂಟ್ ನಲ್ಲಿ ಕಾರು ಬಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಜಲ್ನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯ ಕಡ್ವಾಂಚಿ ಗ್ರಾಮದ ಬಳಿ ನಿನ್ನೆ ರಾತ್ರಿ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ವೇ ನಲ್ಲಿ ಒಂದು ಕಾರು ರಾಂಗ್ ರೂಟ್ ಲ್ಲಿ ಬಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಇನ್ನೂ ನಾಲ್ವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ರಾತ್ರಿ ವೇಳೆ ಕಾರು ಪೆಟ್ರೋಲ್ ಬಂಕ್ ಗೆ ಹೋಗಿ ರಾಂಗ್ ರೂಟ್ ನಲ್ಲಿ ಹೆದ್ದಾರಿ ಪ್ರವೇಶಿಸುವಾಗ ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಗಾಳಿಗೆ ಹಾರಿ ಹೆದ್ದಾರಿಯ ಬ್ಯಾರಿಕೇಡ್ ಮೇಲೆ ಬಿದ್ದಿತು. ಕಾರಿನಲ್ಲಿದ್ದವರು ರಸ್ತೆ ಮೇಲೆ ಬಿದ್ದಿದ್ದಾರೆ. ಮತ್ತೊಂದು ಕಾರು ಡಿಕ್ಕಿ ರಭಸಕ್ಕೆ ಅಪ್ಪಚ್ಚಿಯಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.