ಶ್ರೀನಗರ: ಭೀಕರ ಅಪಘಾತವೊಂದು ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ (Jammu And Kashmir) ಅನಂತ್ ನಾಗ್ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಕಾರೊಂದು (Car Accident) ಕಮರಿಗೆ ಬಿದ್ದ ಪರಿಣಾಮ ಐವರು ಮಕ್ಕಳು ಸೇರಿದಂತೆ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ದಕ್ಸುಮ್ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಮರಿಗೆ ಉರುಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. ದಕ್ಸುಮ್ ಪ್ರದೇಶದಿಂದ ಸುಮಾರು 20 ಕಿಮೀ ದೂರದಲ್ಲಿರುವ ಆರ್ಶುನ್ ಹಟ್ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದೆ. ಶವಗಳನ್ನು ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು. ನಾಲ್ವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








