ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಹತ್ತಿರ ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. 10 ಜನರನ್ನು ಹೊತ್ತು ಸಾಗುತ್ತಿದ್ದ ಟಾಟಾ ಸುಮೋ ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸೆಂಗಂ ಹತ್ತಿರ ಸರ್ಕಾರಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರನ್ನು ಸೆಂಗಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸೆಂಗಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂಗಮ-ಕೃಷ್ಣಗಿರಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.