ಬೆಳಗಾವಿ: ಕಾರು ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ದೇವಗಿರಿ ಬಂಬರಗಾ ಕ್ರಾಸ್ ಹತ್ತಿರ ನಡೆದಿದೆ.
ಸಾವನ್ನಪ್ಪಿದವರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಸಜೀವವಾಗಿ ದಹನಗೊಂಡ ದುರ್ದೈವಿಗಳು. ಅಲ್ಲದೇ, ಘಟನೆಯಲ್ಲಿ ಮಹೇಶ್ ಬೆಳ್ಗಾಂವಕರ್, ಸ್ನೇಹಾ ಬೆಳ್ಗಾಂವಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಬಂಧಿಕರ ಮದುವೆ ಮುಗಿಸಿ ಮನೆಗೆ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬಂಬರಗಾ ಕ್ರಾಸ್ ಹತ್ತಿರ ಟಿಪ್ಪರ್ ಅಡ್ಡ ಬಂದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ. ಆಗ ಟಿಪ್ಪರ್ ನ ಡೀಸೆಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಟಿಪ್ಪರ್ ಚಾಲಕ ಪೊಲೀಸರಿಗೆ ಶರಣಾಗಿದ್ದಾನೆ.