ಚೆನ್ನೈ: ಕಾರು (Car) ಹಾಗೂ ಟ್ರಕ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 8 ಜನ ಸಾವಲನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಮಿಳುನಾಡಿನ (Tamil Nadu) ತಿರುವಣ್ಣಾಮಲೈನಲ್ಲಿ (Tiruvannamalai) ನಡೆದಿದೆ. ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿದ್ದವರು ದೇವಸ್ಥಾನವೊಂದಕ್ಕೆ ತೆರಳಿ ಮರಳಿ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ 6 ಜನ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಎರಡೂ ವಾಹನಗಳು ಸಂಪೂರ್ಣವಾಗಿ ಜಖಂ ಆಗಿವೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.