ನೆಲಮಂಗಲ: ಬೈಕ್ ಗಳ (Bike) ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ತಂದೆ ಹಾಗೂ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಲ್ಲದೇ, ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಈ ಘಟನೆ ನೆಲಮಂಗಲದಲ್ಲಿ (Nelamangala) ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ (Father) ಹಾಗೂ ನಾಲ್ಕು ವರ್ಷದ ಮಗು (Child) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ (Bengaluru) ಬರುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.