ಮಂಡ್ಯ : ಭೀಕರ ಅಪಘಾತದ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿಯೇ ಈ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಓರ್ವ ವ್ಯಸ್ಥಿ ಸಾವನ್ನಪ್ಪಿದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಂತರ ಕಾರು ಹೊತ್ತಿ ಉರಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದ ಬಳಿ ನಡೆದಿತ್ತು. 47 ವರ್ಷದ ಬಾಬು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿತ್ತು. ಕಾರಿನಲ್ಲಿದ್ದವರನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ.