ಗದಗ : ಕಾರು (Car) ಹಾಗೂ ಬಸ್ (Bus) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕುಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಂದೆ ಹೆಚ್. ಬಾಲರಾಜ್ (65) ಹಾಗೂ ಮಗ ವಿನಯ್ (32) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರನ್ನು ಹೊಸಪೇಟೆ ಮೂಲದವರು ಎಂದು ಗುರುತಿಸಲಾಗಿದೆ. ಮೃತ ತಂದೆ ನಿವೃತ್ತ ಡಿಡಿಪಿಐ ಆಗಿದ್ದು, ಮಗ ವಿನಯ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದರು. ಇವರು ಹೊಸಪೇಟೆಯಿಂದ ಗದಗ (Gadag) ಮಾರ್ಗವಾಗಿ ಹುಬ್ಬಳ್ಳಿಗೆ (Hubballi) ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಸ್ ಗದಗದಿಂದ ಕೊಪ್ಪಳಕ್ಕೆ (Koppal) ತೆರಳುತ್ತಿತ್ತು. ಹೈವೇನಲ್ಲಿ ತಿರುವು ಪಡೆದುಕೊಂಡು ಲಕ್ಕುಂಡಿ ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘತಾದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ದಾರುಣವಾಗಿ ಸಾವನ್ನಪ್ಪಿದ್ದಾರೆ.








