ಲಕ್ನೋ: ಕಾರು ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ (Yamuna Expressway) ಈ ಘಟನೆ ಸಂಭವಿಸಿದೆ. ಹೈವೇಯಲ್ಲಿ ಸಾಗುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು, ನಂತರ ಅದೇ ಮಾರ್ಗವಾಗಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸಜೀವವಾಗಿ ದಹನವಾಗಿದ್ದಾರೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದಾರೆ. ಬಸ್ ಆಗ್ರಾದಿಂದ ನೋಯ್ಡಾಗೆ ತೆರಳುತ್ತಿತ್ತು ಎನ್ನಲಾಗಿದೆ.