ಕಲಬುರಗಿ: ಭೀಕರ ಅಪಘಾತವೊಂದಕ್ಕೆ ಐವರು ಬಲಿಯಾಗಿರುವ ಘಟನೆ ನಡೆದಿದೆ.
ಬೈಕ್ ಹಾಗೂ ಲಾರಿ (Lorry) ಮಧ್ಯೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಹತ್ತಿರ ನಡೆದಿದೆ.
ಅಪಘಾತಲ್ಲಿ ನೇಪಾಳ (Nepal) ಮೂಲದ ಮಕ್ಕಳಿಬ್ಬರು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಒಂದೇ ಕುಟುಂಬದ ಐವರು ತೆರಳುತ್ತಿದ್ದರು. ಆದರೆ, ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.








