ಭೋಪಾಲ್ : ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಚಿತ್ರಕೂಟದ ಅಮನ್ ಪುರದಲ್ಲಿ ಎನ್ ಎಚ್ 35 ರಲ್ಲಿ ವೇಗವಾಗಿ ಬಂದ ಟ್ರಕ್ಕೊಂದು ಇ-ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಪೈಕಿ ಐವರ ಗುರುತು ಪತ್ತೆಯಾಗಿದೆ. ಉಳಿದವರು ಇಬ್ಬರ ಗುರುತು ಪತ್ತೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ಹೇಳಿದ್ದಾರೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಸ್ ಪಲ್ಟಿಯಾಗಿದೆ. ಪರಿಣಾಮ ಕನಿಷ್ಠ 30 ಜನರು ಗಾಯಗೊಂಡಿದ್ದಾರೆ.








