ರಾಯಚೂರು: ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು (Sindhnur) ತಾಲೂಕಿನ ಪಗಡದಿನ್ನಿ ಕ್ಯಾಂಪ್ ಹತ್ತಿರ ನಡೆದಿದೆ.
ಲಾರಿ ಹಾಗೂ ಟಾಟಾ ಏಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಅಂಬರೀಶ್ (30), ರಮೇಶ್ (28), ರವಿ (20) ಚಾಲಕ ಇಸ್ಮಾಯಿಲ್ (27) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಸಾವನ್ನಪ್ಪಿದವರು ಟಾಟಾ ಏಸ್ ನಲ್ಲಿ ಚಲಿಸುತ್ತಿದ್ದರು ಎನ್ನಲಾಗಿದೆ. ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವನ್ನಪ್ಪಿದವರು ಸಿಂಧನೂರಿನ ಸಾಯಿ ಸಂಗಮ್ ಸಪ್ಲಾಯರ್ನ ಕೆಲಸಗಾರರಾಗಿದ್ದು, ಮದುವೆ ಸಮಾರಂಭದ ಹಿನ್ನೆಲೆಯಲ್ಲಿ ಅಲಂಕಾರದ ಹಿನ್ನೆಲೆಯಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿಂಧನೂರು ಕಡೆಗೆ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಘಟನೆ ನಡೆದಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.