ಬೀದರ್: ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಟ್ರಕ್ ಹಾಗೂ ಟಾಟಾ ಎಸ್ ಮಧ್ಯೆ ಅಪಘಾತ ನಡೆದಿದ್ದು, ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಹತ್ತಿರ ಈ ಘಟನೆ ನಡೆದಿದೆ. ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವನ್ನಪ್ಪಿದವರು ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎನ್ನಲಾಗಿದೆ.
ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಗೆ ತೆರಳುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಸಾವನ್ನಪ್ಪಿದ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.