ಗದಗ: ಕಾರೊಂದು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಕ್ಕದಲ್ಲಿದ್ದ ಶೌಚಾಲಯಕ್ಕೆ (Toilet) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ಮೃತರು ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನವರು ಎಂದು ಗುರುತಿಸಲಾಗಿದೆ.
ಸಿದ್ದಯ್ಯ ಪಾಟೀಲ್, ಬಾಬು ತಾರಿಹಾಳ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಶಶಿ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.