ಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿದೆ. ಹೀಗಾಗಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಬ್ಯಾಡಗಿಯ (Byadagi) ಮೊಟೇಬೆನ್ನೂರಿನ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಕ್ರೇನ್ ಮೂಲಕ ಬಸ್ನ್ನು ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸಿ, ರಸ್ತೆ ಸುಗಮ ಮಾಡಲಾಯಿತು. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.