ತುಮಕೂರು: ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಡಗೊಂಡನಹಳ್ಳಿ ಹತ್ತಿರ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಓರ್ವ ಸವಾರ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗದೆ. ಶ್ರೀ ರಂಗಪ್ಪ (30) ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಬೈಕ್ ನಲ್ಲಿದ್ದವರು ಪಾವಗಡಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.