ಹಾಸನ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಶಿವಯೋಗಿಪುರ ಗ್ರಾಮದ ಹತ್ತಿರ ನಡೆದಿದೆ. ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಪುತ್ರ ವಿಶಾಲ್ ಸುಜಯ್ ಕುಮಾರ್, ಮದನ್, ಮೋಹನ್, ಅನಿರುದ್ದಗೆ ಘಟನೆಯಲ್ಲಿ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.








