ಮೈಸೂರು: ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು-ಗೌಡಹಳ್ಳಿ ಗೇಟ್ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಲ್ಲದೇ, ಈ ಘಟನೆಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿವೆ. ರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.