ಬೀದರ್ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ಗೆ ಬಸ್ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ.
ಅಪಘಾತದಲ್ಲಿ ದಂಪತಿ ಗಣೇಶಪುರದ ಜಗನ್ನಾಥ್(35), ಪತ್ನಿ ರೇಣುಕಾ(35) ಹಾಗೂ ಮಗ ವಿನೋದ್ ಕುಮಾರ್(14)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಮೂವರು ಬೈಕ್ ನಲ್ಲಿ ಜಮೀನಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೀದರ್ ಜಿಲ್ಲಾಸ್ಪತ್ರೆಗೆ 3 ಮೃತ ದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.








