ಬೀದರ್ : ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಸ್ಕಾರ್ಪಿಯೋ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಈ ಘಟನೆ ನಡೆದಿದ್ದು, ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ದೇಗುಲದ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಸಿದ್ದಪ್ಪ(45), ಸುಖದೇವ(42) ಸಾವನ್ನಪ್ಪಿದ್ದಾರೆ.
ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.