ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಮಿಳುನಾಡಿನ ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರೂ ಸೇರಿದ್ದಾರೆ. ಆದರೆ, ಸ್ಠೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅಲ್ಲದೇ, ವಿರುದನಗರದ ವೆಂಬಕೋಟೈ ಬಳಿಯ ಮತ್ತುಚಾಮಿ ಪುರಂನಲ್ಲಿ ಘಟನೆ ನಡೆದಿದ್ದು, ಮೃತರು ಅಂಬಿಕಾ, ಮುರುಗ, ಜ್ಯೋತಿ, ಮುತ್ತು ಸೇರಿದಂತೆ 10 ಜನ ನಾಪತ್ತೆಯಾಗಿದ್ದಾರೆ.
ವಿಘ್ನೇಶ್ ಎಂಬವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದು ಎನ್ನಲಾಗಿದೆ. ಗಂಭೀರ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕಾಶಿ ಸರ್ಕಾರಿ ಆಸ್ಪತ್ರೆಯಲ್ಲಿಯೂ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೆಂಬಕೊಟ್ಟೈ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.