ಬೆಂಗಳೂರು: ಭೀಕರ ಅಗ್ನಿ ದುರಂತ (Fire Tragedy) ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಇಲ್ಲಿಯ ಬಳೆಪೇಟೆಯ ಪೇಯಿಂಟ್ ಶಾಪ್ ನಲ್ಲಿಯೇ ಬೆಂಕಿ ಕಾಣಿಸಿಕೊಂಡಿದ್ದು, 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ನಷ್ಟ ಅನುಭವಿಸಿದ ಕುಟುಂಬಸ್ಥರು ಗೋಳಾಡುತ್ತಿದ್ದಾರೆ.
ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ಹೊತ್ತಿನಲ್ಲಿಯೇ ಎರಡು ಅಂತಸ್ತಿಗೆ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್‌ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.