ಬೆಂಗಳೂರು: ಇಲ್ಲಿಯ ವೀರಭದ್ರ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಅಧಿಕ ಬಸ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ ಗಳಿಗೆ ಹಠಾತ್ ಬೆಂಕಿ ತಗುಲಿದ್ದು, ಘಟನಾ ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. 2015ರಲ್ಲಿ ಅಗ್ನಿ ಅವಘಡ ನಡೆದಿದ್ದ ಸ್ಥಳದಲ್ಲಿಯೇ ಮತ್ತೊಮ್ಮೆ ಈಗ ಘಟನೆ ನಡೆದಿದೆ. ಬೆಂಕಿ ನಿಯಂತ್ರಣಕ್ಕೆ ಬಾರದ ಪರಿಣಾಮ ಬಸ್ ಟೈರ್‌ಗಳು ಹಾಗೂ ಡೀಸೆಲ್ ಟ್ಯಾಂಕ್‌ಗಳು ಸ್ಫೋಟಗೊಂಡಿವೆ.
ಎಸ್‌ವಿ ಕೋಚ್ ವರ್ಕ್ಸ್ ಗ್ಯಾರೇಜ್ ನಲ್ಲಿ ಬೆಂಕಿ ತಗುಲಿದೆ. ಸದ್ಯಕ್ಕೆ 20ಕ್ಕೂ ಅಧಿಕ ಬಸ್ ಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಯಾರೂ ಬೆಂಕಿಯಲ್ಲಿ ಸಿಲುಕಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಗ್ಯಾರೇಜ್ ಸುಪರ್ ವೈಸರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಕೂಡ ಇದೇ ಜಾಗದಲ್ಲಿ ಇಂತಹ ಘಟನೆ ಸಂಭವಿಸಿತ್ತು. ಪರಿಣಾಮ 25ಕ್ಕೂ ಅಧಿಕ ಬಸ್ ಗಳು ಸುಟ್ಟು, ಯುವತಿಯೊಬ್ಬರು ಬೆಂಕಿ ಹಚ್ಚಿದ್ದರು.








