ಪಾಟ್ನಾ: ಭೀಕರ ಸರಣಿ ಅಪಘಾತವೊಂದು ನಡೆದಿದ್ದು, 9 ಜನ ದುರ್ಮರಣ ಹೊಂದಿರುವ ಹೃದಯ ವಿದ್ರಾವಕ ಘಟನೆಯೊಂದು ಬಿಹಾರದಲ್ಲಿ ನಡೆದಿದೆ.
ಟ್ರಕ್, ಜೀಪ್ ಹಾಗೂ ಬೈಕ್ ನಡುವೆ ಈ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 9 ಜನರು ಸಾವನ್ನಪ್ಪಿದ್ದಾರೆ. ಜೀಪ್ ವಾಹನದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಜನ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ.
ನಂತರ ಎದುರು ಬರುತ್ತಿದ್ದ ಟ್ರಕ್, ಜೀಪ್ ಹಾಗೂ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸೇರಿದಂತೆ ಜೀಪ್ ನಲ್ಲಿದ್ದ 8 ಜನ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಚಾಲಕ ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಿಎಂ ನಿತೀಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.